ಇಂದು ಶಿರಸಿಯ ಬಸ್ ಸ್ಯಾಂಡ್ ಸರ್ಕಲ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ನೀತಿ ಖಂಡಿಸಿ, ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡಿಸೇಲ್, ಮತ್ತು ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಭೀಮಣ್ಣ ನಾಯ್ಕ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಮೋಗೇರ್, ಡಿಸಿಸಿಯ ಪದಾಧಿಕಾರಿಗಳು,ಬ್ಲಾಕ್ ಅಧ್ಯಕ್ಷರು, ಯುವ ಕಾಂಗ್ರೆಸ್ ಸೇರಿದಂತೆ ಎಲ್ಲ ಸೆಲ್ ಗಳ ಪದಾಧಿಕಾರಿಗಳು, ಎನ್.ಎಸ್.ಯು‌.ಐ. ನ ಸದಸ್ಯರು ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ