ಅಂಕೋಲಾ, ಸೆ.೨೩ : ಸುಂಕಸಾಳ ಡೋಂಗ್ರಿ ಗ್ರಾಮವನ್ನು ಸಂಪರ್ಕಿಸುವ ಸಾರ್ವಜನಿಕರ ಬಹುದಿನದ ಕನಸಾದ ಸುಮಾರು 1ಕೋಟಿ 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ 125 ಮೀ. ಉದ್ದದ ತೂಗು ಸೇತುವೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಇಂದು ಉದ್ಘಾಟಿಸಿ ಸಾರ್ವಜನಿಕರ ಸಂಚಾರಕ್ಕೆ ಅರ್ಪಣೆ ಮಾಡಿದರು.

ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಕರಾವಳಿ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷೆ ಕುಮಟಾ ಶಾಸಕಿ ಶಾರದಾ ಶೆಟ್ಟಿ, ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಮಗದ ಅಧ್ಯಕ್ಷ ರಾಜೇಂದ್ರ ನಾಯ್ಕ, ತಾ.ಪಂ ಅಧ್ಯಕ್ಷೆ ಸುಜಾತಾ ಗಾಂವಕರ, ಜಿ.ಪಂ ಸದಸ್ಯ ಜಗದೀಶ ನಾಯಕ, ಉಪಾಧ್ಯಕ್ಷ ಮಂಜುನಾಥ ಎಸ್. ನಾಯ್ಕ, ಸದಸ್ಯರಾದ ವಿಶ್ವನಾಥ ನಾಯ್ಕ, ಡೋಂಗ್ರಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ, ಪ್ರಮುಖರಾದ ರಮಾನಂದ ನಾಯಕ, ಜಿ.ಎಂ. ಶೆಟ್ಟಿ, ಉದಯ ಡಿ. ನಾಯ್ಕ, ಡಿ.ಎನ್. ನಾಯಕ, ವಿನೋದ ನಾಯಕ, ಮಂಜುಳಾ ವೆರ್ಣೇಕರ, ಮಾಬು ನಾಯ್ಕ, ಪುರುಷೋತ್ತಮ ನಾಯ್ಕ, ಮಾಧವ ನಾಯಕ, ಶಂಭು ಶೆಟ್ಟಿ, ಸುರೇಶ ನಾಯಕ, ಗಣಪತಿ ಗುನಗಾ, ಮಾರುತಿ ನಾಯ್ಕ, ಪ್ರಿಯಾ ವಿನೋದ ನಾಯ್ಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ