ಹೊನ್ನಾವರ, ಸೆ.೨೪: ಇಂದು ಬೆಳಿಗ್ಗೆ ಹೊನ್ನಾವರದ ಗೇರುಸೊಪ್ಪ ಸರ್ಕಲ್ ಬಳಿ ಮಂಗಳೂರು ಕಡೆಯಿಂದ ಗೋವಾ ಕಡೆ ಹೊರಟಿದ್ದ ಗ್ಯಾಸ್ ತುಂಬಿದ ಅನಿಲ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಮಧ್ಯದಲ್ಲಿ ಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಧಾವಿಸಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ.

ಸಧ್ಯಕ್ಕೆ ಸುರಕ್ಷತಾ ಕ್ರಮವಾಗಿ ಗೋವಾ- ಮಂಗಳೂರು ದಾರಿಯನ್ನು ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ