ಶಿರಸಿ, ಸೆ. ೨೫: ಶಿರಸಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಂಸ್ಕೃತ ಭಾಷೆ ಕಲಿಯಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವಂತೆ ಮತ್ತು ಸಂಸ್ಕೃತ ಭಾಷೆ ಕಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಪ್ರಾಚಾರ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಾ. ಶಶಿಭೂಷಣ ಹೆಗಡೆ ಅವರ ನೇತೃತ್ವದಲ್ಲಿ ಇಂದು ಸಹಾಯಕ ಆಯುಕ್ತರಿಗೆ ಮನವಿ ನೀಡಲಾಯಿತು.

ತಕ್ಷಣ ಕ್ರಮಕೈಗೊಳ್ಳದೇ ಹೋದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಡಾ. ಶಶಿಭೂಷಣ ಹೆಗಡೆ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಕೃತ ಭಾಷೆಯ ಉಳಿವಿಗಾಗಿ ಹೋರಾಡುತ್ತಿರುವ ಡಾ. ವಿನಾಯಕ್ ಭಟ್ ಹಾಗೂ ಜನತಾದಳದ ಹಲವು ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ