ದಾಂಡೇಲಿ, ಸೆ.೨೮: ಕರ್ನಾಟಕ ಕೊಂಕಣಿ ಅಕಾಡೆಮಿಯಿಂದ ಹಿಂದೆ ನಡೆಸಲ್ಪಡುತ್ತಿದ್ದು ನಂತರ ಸ್ಥಗಿತಗೊಂಡಿದ್ದ ಕೊಂಕಣಿ ಮೊಬೈಲ್ ಬಜಾರ್ ಇಂದಿನಿಂದ ಪುನರಾರಂಭಗೊಂಡಿದೆ.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಎಚ್.ಖಾದರ್‍ರವರು ಕೊಂಕಣಿ ಅಕಾಡೆಮಿಯ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಪುನರಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಅಧ್ಯಕ್ಷ ಆರ್.ಪಿ. ನಾಯ್ಕ, ಕೊಂಕಣಿ ಮೊಬೈಲ್ ಬಜಾರ್ ಯೋಜನೆಯನ್ನು ಪ್ರಾರಂಭಗೊಳಿಸಿದ್ದ ಅಕಾಡೆಮಿಯ ಮಾಜಿ ಅಧ್ಯಕ್ಷ ರೊಯ್ ಕ್ಯಾಸ್ತೆಲಿನೊ, ಅಕಾಡೆಮಿಯ ಸದಸ್ಯರಾದ ಲಕ್ಷ್ಮಣ ಪ್ರಭು ಕುಂಬ್ಳೆ, ದಾಮೋದರ ಬಂಡರ್ಕರ್ ಪುತ್ತೂರು, ರಿಜಿಸ್ಟ್ರಾರ್ ಡಾ.ಬಿ.ದೇವದಾಸ ಪೈ, ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ