ಶಿರಸಿ, ಸೆ. 28: ಯಲ್ಲಾಪುರದಲ್ಲಿ ಜರುಗಿದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಇಸಳೂರಿನ ಮೂವರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಯಕ್ತಿಕ ಆಟಗಳಲ್ಲಿ ರಾಜ್ಯ ಮಟ್ಟದ ಕ್ರೀಡೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಕುಮಾರ ಆಕಾಶ ಕಮರೂರು ಪೋಲ್ ವಾಲ್ಟ, ಕುಮಾರಿ ಲೀಲಾವತಿ 3000 ಮೀ ಓಟದಲ್ಲಿ, ಕುಮಾರಿ ಮಮತಾ ನಾಯ್ಕ ಭರ್ಚಿ ಎಸೆತದಲ್ಲಿ ಸ್ಥಾನ ಪಡೆದರು.

ಇವರ ಈ ಸಾಧನೆಗೆ ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಬಿ.ವಿ. ಗಣೇಶ ಇವರನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ