ಶಿರಸಿ : ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿಯ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು 9 ನೇ ದಿನವೂ ಕೂಡಾ ವಿಶೇಷ ಪುಷ್ಪಾಲಂಕಾರ ಮಾಡಲಾಗಿದ್ದು, ದೇವಸ್ಥಾನದ ಸಭಾ ಮಂಟಪದ ಹಾಲ್‍ನಲ್ಲಿ ಕೂಡಾ ವಿಶೇಷವಾದ ಅಲಂಕಾರವನ್ನು ಮಾಡಿದ್ದು ಭಕ್ತರನ್ನು ಆಕರ್ಷಿಸುತ್ತಿದೆ. ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯುತ್ತಿದ್ದು ಸಾಯಂಕಾಲ ಹರಿದಾಸ ಶ್ರೀ ಗಣಪತಿ ಹೆಗಡೆ, ಹಡಿನಬಾಳ ಹೊನ್ನಾವರ ರವರಿಂದ ಕೀರ್ತನೆ ಕಾರ್ಯಕ್ರಮ ನಡೆಯಿತು. ಇಂದೂ ಸಹ ವ್ಯಾಪಕ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು. ಬೆಳಿಗ್ಗೆ ಶ್ರೀ ದೇವಸ್ಥಾನದ ಸಭಾ ಮಂಟಪದ ಹಾಲಿನಲ್ಲಿ ಚಿತ್ರಕಲೆ ಸ್ಪರ್ಧೆ ಹಾಗೂ ಮಧ್ಯಾಹ್ನ ಚಿಕ್ಕ ಮಕ್ಕಳ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ನಡೆಯಿತು. ಎಂದಿನಂತೆ ಪುಷ್ಪಾಲಂಕಾರ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದು,ಪುಷ್ಪಾಲಂಕಾರ ಸೇವೆ ಸಲ್ಲಿಸಬಯಸುವ ಭಕ್ತರು ಮುಂಚಿತವಾಗಿ ದೇಣಿಗೆಯೊಂದಿಗೆ ಹೆಸರು ನೊಂದಾಯಿಸಬೇಕೆಂದು ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ವೆಂಕಟೇಶ. ಎಲ್. ನಾಯ್ಕ ತಿಳಿಸಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ