ಭಟ್ಕಳ: ಅ. ೩. ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳಿಗೆ ಕೊಚ್ಚಿ ಹೋಗಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾದ ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಗಣೇಶ ನಾಯ್ಕ(೧೦), ವಿನಾಯಕ ನಾಯ್ಕ(೧೪) ಮೃತ ದುರ್ದೈವಿಗಳು. ಸೋಮವಾರ ಸಮುದ್ರದಲ್ಲಿ ವೇಳೆ ಅಲೆಗಳಿಗೆ ಸಿಕ್ಕು ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರ ಸುಳಿವು ಸಿಕ್ಕಿರಲಿಲ್ಲ.ಮಂಗಳವಾರ ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ದಾಖಲಾಗಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ