ಹೊನ್ನಾವರ, ಅ.೩: ತೀವ್ರ ಅಸ್ವಸ್ಥರಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಂ.ಮಂಜುನಾಥ ಅವರು ಮಂಗಳವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಸೂಚನೆಯ ಮೇರೆಗೆ ಅವರು ಜಿಲ್ಲಾಡಳಿತದ ಪರವಾಗಿ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದರು. ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಕಳೆದ ಐದಾರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಮುಂದುವರಿಸಲಾಗಿದೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ