ಶಿರಸಿ, ಅ. 5: ಶಿರಸಿ ತಾಲೂಕಿನ ಅಂಡಗಿ ಗ್ರಾಮಪಂಚಾಯತ ವ್ಯಾಪ್ತಿಯಲ್ಲಿನ ರಾಮಾಪುರ ಗ್ರಾಮದ ಸರಕಾರಿ ಶಾಲೆಯಲ್ಲಿ 3 ವರ್ಷಗಳಿಂದ ಶಿಕ್ಷಕರ ಕೊರತೆ ಇದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಭಾಗವಹಿಸಲು ಆಗದೆ ಶಿಕ್ಷಣವು ಕುಂಠಿತವಾಗಿದೆ. ಇದರಿಂದ ಬೇಸತ್ತ ಪಾಲಕರು ತಮ್ಮ ಮಕ್ಕಳನ್ನು ಬೇರೆ ಶಾಲೆಯತ್ತ ಕಳಿಸುತ್ತಿದ್ದಾರೆ. 2015-16ರಲ್ಲಿ 85ರಷ್ಟಿದ್ದ ಮಕ್ಕಳ ಸಂಖ್ಯೆ ಇಂದಿಗೆ ಕೇವಲ 58ಕ್ಕೆ ಇಳಿದಿರುವುದು ಸರಕಾರಿ ಶಾಲೆಯ ಪರಿಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಪ್ರಸ್ತುತ ಕೇವಲ ಬ್ಬರು ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಾ ಇದ್ದು ಇನ್ನೂ ಮೂವರು ಶಿಕ್ಷಕರ ಕೊರತೆ ಬಾಧಿಸುತ್ತಿದೆ. ಈ ಬಗ್ಗೆ ಗ್ರಾಮಸ್ಥರು, ಸ್ಥಳೀಯ ಸಂಘಟನೆಯವರು ಎಷ್ಟೇ ಮನವಿ ಸಲ್ಲಿಸಿದರೂ ಸರ್ಕಾರವಾಗಲಿ, ಸಂಬಂಧಪಟ್ಟ ಅಧಿಕಾರಿಗಳಾಗಲಿ ಇನ್ನೂ ನಿದ್ದೆಯಿಂದ ಎದ್ದಿಲ್ಲದಿರುವುದು ನಮ್ಮ ವ್ಯವಸ್ಥೆಯ ದುರಂತ!

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ