ಕಾರವಾರ: ಪ್ರಧಾನಿ‌ ನರೇಂದ್ರ ಮೋದಿ ವಿರುದ್ದ ಅವಾಚ್ಛ ಶಬ್ದಗಳಿಂದ ನಿಂದಿಸಿದ ಸಚಿವ ರೋಷನ್ ಬೇಗ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ, ಅದನ್ನು ದಹಿಸುವ ಮೂಲಕ ನಗರದ ಸುಭಾಸ್ ಸರ್ಕಲ್ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ದೇಶದ ಪ್ರಧಾನಿ ಮೋದಿ ಅವರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ಭಾಷಣ ಮಾಡಿದ್ದ ಸಚಿವ ರೋಷನ್ ಬೇಗ್ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು ಎಂದು ಟೀಕಿಸಿದರು. ರೋಶನ್ ಬೇಗ ಪ್ರಧಾನ ಮಂತ್ರಿ ತಾಯಿ ಬಗ್ಗೆ ಕೆಟ್ಟದಾಗಿ ಮಾತಾಡಿರುವುದು ಒಬ್ಬ ಉನ್ನತ ಸ್ಥಾನದಲ್ಲದ್ದು ಮಾತನಾಡುವುದು ಸರಿಯಲ್ಲ. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಬಿಜೆಪಿಗರಿಂದಲೂ ಅವಾಚ್ಯ ಶಬ್ದ
ರೋಷನ್ ಬೇಗ್ ಅವರ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸುವ ವೇಳೆ ಕೊಂಕಣಿ ಭಾಷೆಯಲ್ಲಿ ಕಾರ್ಯಕರ್ತರೊಬ್ಬರು ಅವಾಚ್ಯ ಶಬ್ದ ಬಳಸಿದ್ದಾರೆ. ರೋಷನ್ ಬೇಗ್ ಅವರು ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಅವರನ್ನು ನಿಂದಿಸುವಾಗ ಮಾತಿನ ಭರದಲ್ಲಿ ಈ ಪದಗಳನ್ನು ಕಾರ್ಯಕರ್ತರು ಬಳಸಿದ್ದಾರೆ. ಜತೆಗೆ ಈ ಪದಕ್ಕೆ ಎಲ್ಲರೂ ನಕ್ಕು, ಸಚಿವರಿಗೆ ಅಪಹಾಸ್ಯ ಕೂಡ ಮಾಡಿದ್ದಾರೆ.

ಪ್ರತ್ಯುತ್ತರಿಸಿ

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ